ಸೊಫಿಯಾ: ಉತ್ತರ ಮೆಸಡೋನಿಯಾದತ್ತ ಹೊರಟಿದ್ದ ಬಸ್ವೊಂದು ಮಂಗಳವಾರ ಅಪಘಾತಕ್ಕೀಗೀಡಾಗಿದ್ದು, ಇದರಲ್ಲಿ 12 ಮಕ್ಕಳು ಸೇರಿದಂತೆ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಟರ್ಕಿಯಿಂದಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯು ಬಲ್ಗೇರಿಯಾದ ಪಶ್ಚಿಮ ಭಾಗದಲ್ಲಿ ನಡೆದಿದೆ. ಈ ಅವಘಡದಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.