ADVERTISEMENT

ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಬಸ್‌: ನಾಲ್ವರಿಗೆ ಗಾಯ

ಪಿಟಿಐ
Published 12 ಆಗಸ್ಟ್ 2023, 12:50 IST
Last Updated 12 ಆಗಸ್ಟ್ 2023, 12:50 IST
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕಾಂಗೋ ಬಳಿ ಕಂದಕಕ್ಕೆ ಉರುಳಿದ ಬಸ್‌ –ಪಿಟಿಐ ಚಿತ್ರ
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕಾಂಗೋ ಬಳಿ ಕಂದಕಕ್ಕೆ ಉರುಳಿದ ಬಸ್‌ –ಪಿಟಿಐ ಚಿತ್ರ   

ಶಿಮ್ಲಾ: ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಮಂಡಿ ಜಿಲ್ಲೆಯ ಕಾಂಗೊ ಬಳಿ ಶನಿವಾರ ಕಂದಕಕ್ಕೆ ಉರುಳಿ ನಾಲ್ವರು ಗಾಯಗೊಂಡಿದ್ದಾರೆ.

12 ಮಂದಿ ಪ್ರಯಾಣಿಕರಿದ್ದ ಬಸ್‌ ಮಂಡಿಯಿಂದ ಶಿಮ್ಲಾಕ್ಕೆ ತೆರಳುತ್ತಿತ್ತು. ಕಾಂಗೊ ತಲುಪಿದಾಗ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಜೂನ್‌ 24 ರಿಂದ ಇದುವರೆಗೆ 107 ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಹೇಳಿದೆ.

ADVERTISEMENT

ಓದಿ... ವಿಡಿಯೊ: ಹಿಮಾಚಲ ಪ್ರದೇಶದಲ್ಲಿ ಮುಂದುವರಿದ ಭಾರಿ ಮಳೆ, ಉಕ್ಕಿ ಹರಿದ ಬಿಯಾಸ್ ನದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.