ADVERTISEMENT

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಐವರು ಪ್ರಯಾಣಿಕರು ಸಜೀವ ದಹನ

ಪಿಟಿಐ
Published 15 ಮೇ 2025, 5:53 IST
Last Updated 15 ಮೇ 2025, 5:53 IST
<div class="paragraphs"><p> ಬೆಂಕಿ&nbsp;ಹೊತ್ತಿಕೊಂಡು ಸುಟ್ಟಿರುವ ಬಸ್‌</p></div>

ಬೆಂಕಿ ಹೊತ್ತಿಕೊಂಡು ಸುಟ್ಟಿರುವ ಬಸ್‌

   

ಪಿಟಿಐ ಚಿತ್ರ

ಲಖನೌ: ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನಗೊಂಡ ಘಟನೆ ಹೈದರಾಬಾದ್‌ನ ಮೋಹನಲಾಲ್‌ಗಂಜ್‌ನಲ್ಲಿ ನಡೆದಿದೆ.

ADVERTISEMENT

ಗುರುವಾರ ಬೆಳಗಿನ ಜಾವ 5 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಬಸ್‌ನಲ್ಲಿ 80 ಜನ ಪ್ರಯಾಣಿಕರಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಹಾರದ ಬೆಗುಸರೈನಿಂದ ದೆಹಲಿಗೆ ಬಸ್‌ ತೆರಳುತ್ತಿತ್ತು. ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬಸ್‌ಗೆ ಬೆಂಕಿ ಹೊತ್ತಿಕೊಳ್ಳುವ ವೇಳೆಯಲ್ಲಿ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಐವರು ಹೊರಬರಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.