ADVERTISEMENT

ಫಿರೋಜಾಬಾದ್‌| ಬಸ್‌‌ಗೆ ಡಿಕ್ಕಿ ಹೊಡೆದ ಟ್ರಕ್: ಭೀಕರ ಅಪಘಾತದಲ್ಲಿ 13 ಸಾವು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 1:54 IST
Last Updated 13 ಫೆಬ್ರುವರಿ 2020, 1:54 IST
   

ಪಿಟಿಐ: ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ13ಮಂದಿ ಸಾವಿಗೀಡಾಗಿದ್ದಾರೆ. 8 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಬುಧವಾರ ರಾತ್ರಿ 10 ಗಂಟೆಗೆ ಫಿರೋಜಾಬಾದ್‌ನ ನಗ್ಲಾ ಖಂಗಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ರಾಜೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸೈಫೈ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದವೈದ್ಯಾಧಿಕಾರಿ ಡಾ. ವಿಶ್ವ ದೀಪಕ್ 13 ಮಂದಿ ಸಾವಿಗೀಡಾಗಿದ್ದಾರೆ. 31 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ADVERTISEMENT

ದೆಹಲಿಯಿಂದ ಮೊತಿಹರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂದಿನಿಂದ ಬಂದ ಕಂಟೇನರ್ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ರಾಜೇಶ್ ಕುಮಾರ್ ಹೇಳಿದ್ದಾರೆ.

ಗಾಯಗೊಂಡ ವ್ಯಕ್ತಿಗಳನ್ನು ಇತವಾಹ್‌ನಲ್ಲಿರುವ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.