ADVERTISEMENT

ವೈಷ್ಣೋದೇವಿ ಯಾತ್ರಾರ್ಥಿಗಳಿದ್ದ ಬಸ್‌ಗೆ ಬೆಂಕಿ; ನಾಲ್ವರು ಸಜೀವ ದಹನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮೇ 2022, 14:54 IST
Last Updated 13 ಮೇ 2022, 14:54 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಕತ್ರಾದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇಗುಲದಿಂದ ಜಮ್ಮುವಿನತ್ತ ತೆರಳುತ್ತಿದ್ದ ಬಸ್‌ಗೆ ದಿಢೀರ್‌ ಬೆಂಕಿ ಹೊತ್ತಿಕೊಂಡು ನಾಲ್ವರು ಯಾತ್ರಾರ್ಥಿಗಳು ಸಜೀವ ದಹನಗೊಂಡು, 20 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

‘ಕತ್ರಾದಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಖಾರ್ಮಲ್ ಬಳಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಬಸ್‌ಗೆ ಆವರಿಸಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ’ ಎಂದು ಜಮ್ಮು ಎಡಿಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ

ಕತ್ರಾದಿಂದ ಜಮ್ಮುವಿನತ್ತ ತೆರಳುತ್ತಿದ್ದ ಸ್ಥಳೀಯ ನೋಂದಣಿಯ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 22 ಮಂದಿಯನ್ನು ಕತ್ರಾಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಮೂವರಿಗೆ ವಿಶೇಷ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.ವಿಧಿ ವಿಜ್ಞಾನ ಪ್ರಯೋಗಾಲಯದ (ಎಸ್‌ಎಫ್‌ಎಲ್‌) ಅಧಿಕಾರಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ಅಪಘಾತದ ಮಾಹಿತಿಯನ್ನು ರಿಯಾಸಿ ಜಿಲ್ಲಾಧಿಕಾರಿಯಿಂದ ಪಡೆದುಕೊಂಡಿದ್ದು, ಸದ್ಯ ಜಮ್ಮುವಿನ ನರೈನಾ ಆಸ್ಪತ್ರೆಗೆ ಸ್ಥಳಾಂತರಿಸಿರುವ ಎಲ್ಲ ಗಾಯಾಳುಗಳಿಗೆ ಸಾಧ್ಯವಿರುವ ನೆರವನ್ನು ನೀಡಲಾಗುವುದು’ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.