ಮತದಾನ
ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿನ 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಬುಧವಾರ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.
ಪಶ್ಚಿಮಬಂಗಾಳದ 4, ಹಿಮಾಚಲ ಪ್ರದೇಶ 3, ಉತ್ತರಾಖಂಡ 2, ಬಿಹಾರ, ಮಧ್ಯಪ್ರದೇಶ, ಪಂಜಾಬ್, ತಮಿಳುನಾಡಿನ ತಲಾ ಒಂದು ಸ್ಥಾನಕ್ಕೆ ಮತದಾನ ನಡೆಯುತ್ತಿದೆ.
ಮತದಾನಕ್ಕೆ ಸ್ಥಳೀಯ ಸರ್ಕಾರಗಳು ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಿವೆ.
ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರಗೆ ನಡೆಯಲಿದೆ. ಮತ ಎಣಿಕೆ ಜುಲೈ 13ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.