ADVERTISEMENT

ನ.3, 7ಕ್ಕೆ ಲೋಕಸಭಾ ಮತ್ತು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 20:58 IST
Last Updated 29 ಸೆಪ್ಟೆಂಬರ್ 2020, 20:58 IST
   

ನವದೆಹಲಿ: ನವೆಂಬರ್ 3 ಮತ್ತು 7ರಂದು ಒಂದು ಲೋಕಸಭಾ ಸ್ಥಾನಕ್ಕೆ ಹಾಗೂ 12 ರಾಜ್ಯಗಳ 56 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

‘ಆದರೆ, ಈ ಸಮಯದಲ್ಲಿ ಇತರ ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಏಳು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿಲ್ಲ’ ಎಂದೂ ಆಯೋಗ ಸ್ಪಷ್ಟಪಡಿಸಿದೆ.

ನ. 3ರಂದು 54 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂನ. 7ರಂದು ಬಿಹಾರದ ಲೋಕಸಭಾ ಕ್ಷೇತ್ರ ಮತ್ತು ಮಣಿಪುರದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ADVERTISEMENT

ಎಲ್ಲಾ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ನ. 10ರಂದು ನಡೆಯಲಿದೆ. ಇದರ ಜೊತೆಗೆ ಬಿಹಾರದ ಸಾಮಾನ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವೂ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.