ಜೈಪುರ: ಕೇಂದ್ರದ ಮಾಜಿ ಸಚಿವ ಸಿ.ಪಿ. ಜೋಷಿ ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಂಗಾಮಿ ಸ್ಪೀಕರ್ ಗುಲಾಬ್ ಚಂದ್ ಕಟಾರಿಯಾ ಅವರಿಂದ ಜೋಷಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಜತೆ 68 ವರ್ಷದ ಜೋಷಿ ಅವರ ಹೆಸರು ಕೂಡ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿತ್ತು.
2009–2013ರವರೆಗೆ ಯುಪಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅವರು ಹೆದ್ದಾರಿ, ಭೂಸಾರಿಗೆ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.