ADVERTISEMENT

ಅತೀ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದು ಮೋದಿಯಲ್ಲ, ಬಿಜೆಪಿಯ ಸಿ.ಆರ್.ಪಾಟೀಲ್  

ಪಿಟಿಐ
Published 24 ಮೇ 2019, 13:51 IST
Last Updated 24 ಮೇ 2019, 13:51 IST
ಕೃಪೆ: ಸಿ. ಆರ್. ಪಾಟೀಲ್ ಅವರ ಫೇಸ್‌ಬುಕ್
ಕೃಪೆ: ಸಿ. ಆರ್. ಪಾಟೀಲ್ ಅವರ ಫೇಸ್‌ಬುಕ್   

ನವದೆಹಲಿ: 2019 ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳ ಅಂತರದಿಂದ ವಿಜಯ ಗಳಿಸಿದ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಎಂಬ ಪ್ರಚಾರ ನಡೆದಿದೆ.ಆದರೆ ಅತೀ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದು ಮೋದಿಯಲ್ಲ, ಗುಜರಾತಿನ ನವ್‌ಸಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸಿ.ಆರ್. ಪಾಟೀಲ್.

ಸಿ. ಆರ್. ಪಾಟೀಲ್ ಅವರು ತಮ್ಮ ಪ್ರತಿಸ್ಪರ್ಧಿಯನ್ನು 6.89 ಲಕ್ಷ ಮತಗಳಿಂದ ಪರಾಭವಗೊಳಿಸಿದ್ದಾರೆ. 2014ರ ಚುನಾವಣೆಯಲ್ಲಿ ಪ್ರೀತಂ ಮುಂಡೆ ಅವರು ಮಹಾರಾಷ್ಟ್ರದಬೀಡ್ ಚುನಾವಣಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ 6.96 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಮೋದಿಯವರು ಈ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ 4.80 ಲಕ್ಷ ಮತಗಳ ಅಂತರದಿಂದ ಎರಡನೇ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.ವಿ.ಕೆ ಸಿಂಗ್ ಅವರು ಗಾಜಿಯಾಬಾದ್ ಲೋಕಸಭಾ ಕ್ಷೇತ್ರದಲ್ಲಿ 5 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಸಮಾಜವಾದಿ ಪಕ್ಷದ ಸುರೇಶ್ ಬನ್ಸಾಲ್ ಅವರನ್ನು ಪರಾಭವಗೊಳಿಸಿದ್ದಾರೆ. ಬೇಗುಸರೈನಲ್ಲಿ ಗಿರಿರಾಜ್ ಸಿಂಗ್ 4.44 ಲಕ್ಷ ಮತಗಳ ಅಂತರದಿಂದ ಸಿಪಿಐ(ಎಂ) ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರನ್ನು ಸೋಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.