ADVERTISEMENT

16ರಿಂದ ಸಿಎ ಪರೀಕ್ಷೆ

ಪಿಟಿಐ
Published 10 ಮೇ 2025, 20:22 IST
Last Updated 10 ಮೇ 2025, 20:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 16ರಿಂದ 24ರ ವರೆಗೆ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ನಡೆಸಲಿದೆ. 

ನಿಗದಿತ ವೇಳಾಪಟ್ಟಿಯಂತೆ ಮೇ 9ರಿಂದ 14ರ ವರೆಗೆ ನಡೆಯಬೇಕಿದ್ದ ಪರೀಕ್ಷೆಯನ್ನು ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಸ್ಥಿತಿಯಿಂದಾಗಿ ಮುಂದೂಡಲಾಗಿತ್ತು. 

55,666 ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಹಾಗೂ 1.02 ಲಕ್ಷ ವಿದ್ಯಾರ್ಥಿಗಳು ಸಿಎ ಮಧ್ಯಂತರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.