ADVERTISEMENT

ಯುಎಇ ಜೊತೆಗಿನ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಕ್ಯಾಬಿನೆಟ್ ಅನುಮೋದನೆ

ಪಿಟಿಐ
Published 1 ಫೆಬ್ರುವರಿ 2024, 11:08 IST
Last Updated 1 ಫೆಬ್ರುವರಿ 2024, 11:08 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್</p></div>

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್

   

ಚಿತ್ರ ಕೃಪೆ– ಪಿಟಿಐ 

ನವದೆಹಲಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೆಟ್ಸ್ (UAE) ನಡುವಿನ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ (BIT) ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ADVERTISEMENT

ಈ ಒಪ್ಪಂದವು ಉಭಯ ದೇಶಗಳ ನಡುವೆ ಹೂಡಿಕೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟವು ಭಾರತ ಮತ್ತು ಯುಎಇ ನಡುವೆ ಉತ್ಪಾದನೆ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಅನುಮೋದನೆ ನೀಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಈ ಒಪ್ಪಂದವು ವಿಶೇಷವಾಗಿ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಇದರ ಪರಿಣಾಮವಾಗಿ ವಿದೇಶಿ ಹೂಡಿಕೆ ಮತ್ತು ಸಾಗರೋತ್ತರ ನೇರ ಹೂಡಿಕೆ ಅವಕಾಶಗಳು ಹೆಚ್ಚಾಗುತ್ತವೆ ಎಂದು ಸರ್ಕಾರ ಹೇಳಿದೆ. ಇದು ಉದ್ಯೋಗ ಸೃಷ್ಟಿಯ ಮೇಲೂ ಸಕಾರಾತ್ಮಕ ಪರಿಣಾಮ ಬೀರಬಹುದು ಎಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.