ADVERTISEMENT

ಕೃಷಿ ಕಾಯ್ದೆಗಳ ರದ್ದತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಪಿಟಿಐ
Published 24 ನವೆಂಬರ್ 2021, 8:41 IST
Last Updated 24 ನವೆಂಬರ್ 2021, 8:41 IST
ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದ ಸಂದರ್ಭ ದೆಹಲಿಯ ಸಿಂಘು ಗಡಿಯಲ್ಲಿ ಕಂಡುಬಂದ ದೃಶ್ಯ (ಪಿಟಿಐ ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದ ಸಂದರ್ಭ ದೆಹಲಿಯ ಸಿಂಘು ಗಡಿಯಲ್ಲಿ ಕಂಡುಬಂದ ದೃಶ್ಯ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಕ್ಕಾಗಿ ರೂಪಿಸಲಾಗಿರುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಕೆಲವೇ ದಿನಗಳಲ್ಲಿ ‘ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021’ಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ಹೇಳಿವೆ.

ಹೊಸ ಮಸೂದೆಯನ್ನು ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ. ಅಧಿವೇಶನ ನವೆಂಬರ್ 29ರಂದು ಆರಂಭವಾಗಲಿದೆ.

ರೈತರ ದೀರ್ಘಕಾಲೀನ ಪ್ರತಿಭಟನೆಯ ಬಳಿಕ ನವೆಂಬರ್ 19ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿಯವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.