ಸಾಂದರ್ಭಿಕ ಚಿತ್ರ
ನವದೆಹಲಿ: ಅಯೋಧ್ಯೆ ವಿಮಾನನಿಲ್ದಾಣವನ್ನು ‘ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನನಿಲ್ದಾಣ, ಅಯೋಧ್ಯಾಧಾಮ್’ ಎಂದು ಹೆಸರಿಸುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಸಭೆ ಶುಕ್ರವಾರ ಅಂಗೀಕಾರ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಈ ವಿಮಾನನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನನಿಲ್ದಾಣವಾಗಿ ಕೂಡ ಘೋಷಿಸಿದೆ. ಮೋದಿ ಅವರು ಡಿ. 30ರಂದು ವಿಮಾನನಿಲ್ದಾಣವನ್ನು ಉದ್ಘಾಟಿಸಿದ್ದರು.
ಅಂತರರಾಷ್ಟ್ರೀಯ ವಿಮಾನನಿಲ್ದಾಣ ಎಂದು ಘೋಷಿಸಿರುವುದರಿಂದ ಈ ಪ್ರದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ. ಅಲ್ಲದೆ ಪ್ರವಾಸಿಗರು ಮತ್ತು ವಿದೇಶಿ ಯಾತ್ರಿಗಳು ಬರುವುದರಿಂದ ಅಯೋಧ್ಯೆಯು ಜಾಗತಿಕ ಮಟ್ಟದ ಯಾತ್ರಾ ಸ್ಥಳವಾಗಿಯೂ ರೂಪುಗೊಳ್ಳಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.