ADVERTISEMENT

ಧಾರವಾಡ ಸೇರಿ 5 ಐಐಟಿಗಳ ವಿಸ್ತರಣೆಗೆ ಅಸ್ತು: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 7 ಮೇ 2025, 13:13 IST
Last Updated 7 ಮೇ 2025, 13:13 IST
.
.   

ನವದೆಹಲಿ: ಕರ್ನಾಟಕದ ಧಾರವಾಡ ಐಐಟಿ ಸೇರಿದಂತೆ ದೇಶದ ಐದು ಐಐಟಿಗಳಲ್ಲಿ
₹11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯು ಯೋಜನೆಗೆ ಅನುಮೋದನೆ ನೀಡಿತು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಧಾರವಾಡ ಹಾಗೂ ಆಂಧ್ರಪ್ರದೇಶದ ತಿರುಪತಿ, ಛತ್ತೀಸಗಢದ ಭಿಲಾಯಿ, ಜಮ್ಮು ಮತ್ತು ಕೇರಳದ ಪಾಲಕ್ಕಾಡ್‌ನಲ್ಲಿ ಸ್ಥಾಪಿಸಲಾಗಿರುವ ಐಐಟಿಗಳ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಈ ಐದು ಐಐಟಿಗಳಲ್ಲಿ 6,500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಸೌಲಭ್ಯಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಕೈಗಾರಿಕೆ-ಶೈಕ್ಷಣಿಕ ಸಂಪರ್ಕವನ್ನು ಬಲಪಡಿಸಲು ಐದು ಹೊಸ ಅತ್ಯಾಧುನಿಕ ಸಂಶೋಧನಾ ಪಾರ್ಕ್‌ಗಳು ಸಹ ಈ ಯೋಜನೆಯಲ್ಲಿ ಬರಲಿವೆ ಎಂದು ತಿಳಿಸಿದರು.

130 ಅಧ್ಯಾಪಕರ ಹುದ್ದೆ ಸೃಷ್ಟಿ:

2025-26ರಿಂದ 2028-29ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು ₹11,828.79 ಕೋಟಿ ವೆಚ್ಚದಲ್ಲಿ ಈ ಐಐಟಿಗಳಲ್ಲಿ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುತ್ತಿದೆ. ಜೊತೆಗೆ 130 ಅಧ್ಯಾಪಕರ ಹುದ್ದೆಗಳನ್ನು (ಪ್ರೊಫೆಸರ್ ಮಟ್ಟದಲ್ಲಿ ಅಂದರೆ ಹಂತ 14 ಮತ್ತು ಅದಕ್ಕಿಂತ ಹೆಚ್ಚಿನ) ಸೃಷ್ಟಿಸಲು ಸಂಪುಟ ಅನುಮೋದಿಸಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.