ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (ಗ್ರಾಮೀಣ) ಇನ್ನೂ ಮೂರು ವರ್ಷಗಳವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಈ ಯೋಜನೆಯನ್ನು ಮಾರ್ಚ್ 2021 ರಿಂದ 2024ರ ಮಾರ್ಚ್ ತನಕ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ವಸತಿಯನ್ನು ನಿರ್ಮಿಸಲಾಗುವುದು’ ಎಂದು ಹೇಳಿದರು.
‘ಈ ವಿಸ್ತರಣೆಯು 155.75 ಲಕ್ಷ ಮನೆಗಳನ್ನು ನಿರ್ಮಿಸಲು ಸಹಾಯವಾಗಲಿದೆ’ ಎಂದು ಸರ್ಕಾರಿ ವಕ್ತಾರರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.