ADVERTISEMENT

ಸಂಪುಟ ಕಾರ್ಯದರ್ಶಿ ರಾಜೀವ್‌ ಸೇವಾ ಅವಧಿ ಒಂದು ವರ್ಷ ವಿಸ್ತರಣೆ 

ಪಿಟಿಐ
Published 5 ಆಗಸ್ಟ್ 2022, 14:47 IST
Last Updated 5 ಆಗಸ್ಟ್ 2022, 14:47 IST

ನವದೆಹಲಿ: ಕೇಂದ್ರದ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಅವರ ಸೇವಾ ಅವಧಿಯನ್ನು ಸರ್ಕಾರ ಒಂದು ವರ್ಷ ವಿಸ್ತರಿಸಿದೆ.

ಗೌಬಾ ಅವರನ್ನು 2019ರಲ್ಲಿ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿತ್ತು.ಕಳೆದ ವರ್ಷ ಆಗಸ್ಟ್‌ನಲ್ಲಿ ಒಂದು ವರ್ಷ ವಿಸ್ತರಣೆ ಮಾಡಲಾಗಿತ್ತು. ಈಗ ಮತ್ತೊಂದು ವರ್ಷ ವಿಸ್ತರಿಸಲಾಗಿದೆ.

ಕ್ಯಾಬಿನೆಟ್ ನೇಮಕಾತಿ ಸಮಿತಿಯು ಗೌಬಾಅವರ ಸೇವೆಯನ್ನು ವಿಸ್ತರಿಸಲು ಅನುಮೋದಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.