ಪ್ರಾತಿನಿಧಿಕ ಚಿತ್ರ
ಚಿತ್ರಕೃಪೆ: iStock Photo
ತಿರುವಂತನಂತಪುರ(ಕೇರಳ): ತೆಲಂಗಾಣ ಸುರಂಗ ಕುಸಿತ ಕಾರ್ಯಾಚರಣೆಯಲ್ಲಿ ಕೇರಳದ ಕೆಡಾವರ್ ನಾಯಿಗಳು ಪಾಲ್ಗೊಳ್ಳಲಿವೆ ಎಂದು ಕೇರಳ ಸರ್ಕಾರ ಗುರುವಾರ ತಿಳಿಸಿದೆ.
ನಾಪತ್ತೆಯಾದವರು ಹಾಗೂ ಮನುಷ್ಯರ ಶವಗಳನ್ನು ಪತ್ತೆಹಚ್ಚಲು ವಿಶೇಷವಾಗಿ ತರಬೇತಿ ಪಡೆದ ನಾಯಿಗಳಿವು.
ಕೆಡಾವರ್ ನಾಯಿಗಳು ಮತ್ತು ಅವುಗಳನ್ನು ನಿಭಾಯಿಸುವ ಅಧಿಕಾರಿಗಳು ಗುರುವಾರ ಬೆಳಗ್ಗೆ ಹೈದರಾಬಾದ್‌ಗೆ ತೆರಳಿದ್ದಾರೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನವಿಯ ಮೇರೆಗೆ ರಕ್ಷಣಾ ಕಾರ್ಯಾಚರಣೆಗೆ ನಾಯಿಗಳನ್ನು ಕಳುಹಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ವಿಷಯದಲ್ಲಿ ಸಹಾಯವನ್ನು ಕೋರಿದೆ ಎಂದು ಅದು ತಿಳಿಸಿದೆ.
ಫೆಬ್ರುವರಿ 22ರಂದು ಶ್ರೀಶೈಲಂ ಎಡೆ ದಂಡೆ ಕಾಲುವೆ ಕಾಮಗಾರಿ ನಡೆಯುತ್ತಿರುವ ವೇಳೆ ಸಂಭವಿಸಿದ ಅವಘಡದಲ್ಲಿ 8 ಕಾರ್ಮಿಕರು ಅಪಾಯದಲ್ಲಿ ಸಿಲುಕಿಕೊಂಡಿದ್ದರು. ಈವೆರೆಗೂ ಅವರನ್ನು ಪತ್ತೆ ಮಾಡಿ ಹೊರಗೆ ತರಲು ಸಾಧ್ಯವಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.