ADVERTISEMENT

ಸಂದೇಶ್‌ಖಾಲಿ: ಸಿಬಿಐ ತನಿಖೆಗೆ ಸೂಚನೆ

ಪಿಟಿಐ
Published 10 ಏಪ್ರಿಲ್ 2024, 15:51 IST
Last Updated 10 ಏಪ್ರಿಲ್ 2024, 15:51 IST
.
.   

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ. ಕೃಷಿ ಭೂಮಿಯನ್ನು ಮತ್ಸ್ಯ ಕೃಷಿಗಾಗಿ ಜಲಮೂಲವಾಗಿ ಅಕ್ರಮವಾಗಿ ಬದಲಾಯಿಸಿದ ಆರೋಪದ ಬಗ್ಗೆಯೂ ಸಮಗ್ರ ವರದಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್‌.ಶಿವಗನಂ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಿರ್ದೇಶನ ನೀಡಿತು.

ಪ್ರಕರಣದ ಬಗ್ಗೆ ಸಿಬಿಐನಿಂದ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಕೋರ್ಟ್‌ ಹೇಳಿತು.

ADVERTISEMENT

ಪ್ರಕರಣದ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿ, ಅಂದು ಸಿಬಿಐ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿತು.  

ಟಿಎಂಸಿ ನಾಯಕ ಶಾಜಹಾನ್‌ ಶೇಖ್‌ ಅವರಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ಜನವರಿ 5ರಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗುಂಪೊಂದು ಅಧಿಕಾರಿಗಳ ಮೇಲೆ ಆಕ್ರಮಣ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.