ADVERTISEMENT

ನಂದಿಗ್ರಾಮ ಫಲಿತಾಂಶಕ್ಕೆ ತಕರಾರು: ಮಮತಾ ಅರ್ಜಿ ವಿಚಾರಣೆ ಜೂನ್ 24ಕ್ಕೆ ಮುಂದೂಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜೂನ್ 2021, 6:38 IST
Last Updated 18 ಜೂನ್ 2021, 6:38 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋಲ್ಕತ್ತ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಕೌಶಿಕ್‌ ಚಂದ ನೇತೃತ್ವದ ನ್ಯಾಯಪೀಠವು ಇಂದು (ಜೂನ್‌ 18) ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತು.

ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ಮುಂದಿನ ಗುರುವಾರ ಮತ್ತೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ADVERTISEMENT

‘ಇವಿಎಂಗಳ ದುರ್ಬಳಕೆ ಮಾಡಲಾಗಿದೆ. ಮತಗಳ ಮರು ಎಣಿಕೆ ಮಾಡಬೇಕು ಎಂಬ ನನ್ನ ಮನವಿಯನ್ನು ಚುನಾವಣಾ ಆಯೋಗವು ತಿರಸ್ಕರಿಸಿದೆ’ ಎಂದು ಮಮತಾ ಬ್ಯಾನರ್ಜಿ ಅವರು ಅರ್ಜಿಯಲ್ಲಿ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.