ಕಾರವಾರ: ಯುದ್ಧನೌಕೆಯ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಲು ಅಪರಿಚಿತ ವ್ಯಕ್ತಿಗಳು ಇಲ್ಲಿನ ಕದಂಬ ನೌಕಾನೆಲೆಯ ಕೆಲ ಸಿಬ್ಬಂದಿಗೆ ಕರೆ ಮಾಡಿದ್ದರು ಎಂಬ ವದಂತಿ ಹರಡಿದೆ.
‘ಐಎನ್ಎಸ್ ವಿಕ್ರಮಾದಿತ್ಯ ಮತ್ತು ಐಎನ್ಎಸ್ ವಿಕ್ರಾಂತ್ ಯುದ್ಧನೌಕೆಯ ಚಲನವಲನದ ಕುರಿತು ಮಾಹಿತಿ ಕೇಳಿ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದರ ಕುರಿತು ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ನೌಕಾದಳದ ಅಧಿಕಾರಿಗಳು ಎಲ್ಲ ಸಿಬ್ಬಂದಿಗೆ ಅಪರಿಚಿತ ಕರೆಗೆ ಸ್ಪಂದಿಸದಂತೆ ಸೂಚಿಸಿದ್ದಾರೆ’ ಎಂದು ಮೂಲ ಉಲ್ಲೇಖಿಸಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಕದಂಬ ನೌಕಾನೆಲೆಯಲ್ಲಿ ಯುದ್ಧನೌಕೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನಿ ಮೂಲದ ಗುಪ್ತಚರರಿಗೆ ಸೋರಿಕೆ ಮಾಡಿದ್ದ ಆರೋಪದಡಿ ಈಚೆಗಷ್ಟೆ ರಾಷ್ಟ್ರೀಯ ತನಿಖಾ ದಳ ಇಬ್ಬರನ್ನು ಬಂಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.