ADVERTISEMENT

ಗುಜರಾತ್‌ ವಿಧಾನಸಭೆ ಚುನಾವಣೆ| ಎರಡನೇ ಹಂತದ ಪ್ರಚಾರ ಅಂತ್ಯ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 17:57 IST
Last Updated 3 ಡಿಸೆಂಬರ್ 2022, 17:57 IST
   

ಅಹಮದಾಬಾದ್‌: ಗುಜರಾತ್‌ ವಿಧಾನಸಭೆಗೆ ಎರಡನೇಹಂತದಲ್ಲಿ ಮತದಾನ ನಡೆಯಲಿರುವ 93 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರವು ಶನಿವಾರ ಅಂತ್ಯವಾಗಿದೆ. ಮೊದಲ ಹಂತದಲ್ಲಿ 89 ಕ್ಷೇತ್ರಗಳಲ್ಲಿ
ಡಿಸೆಂಬರ್‌ 1ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಒಟ್ಟು 182 ಕ್ಷೇತ್ರಗಳಿವೆ.

ಎರಡನೇ ಮತ್ತು ಕೊನೆಯ ಹಂತದ ಮತದಾನವು ಸೋಮವಾರ ನಡೆಯಲಿದೆ. ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರ ಮತ್ತು ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರವೂ ಶನಿವಾರ ಕೊನೆಗೊಂಡಿದೆ. ಈ ಕ್ಷೇತ್ರಗಳಲ್ಲಿಯೂ ಸೋಮವಾರ ಮತದಾನ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.