ADVERTISEMENT

ರಾಜಸ್ಥಾನ: ಚುನಾವಣಾ ಪ್ರಚಾರ ಅಂತ್ಯ, ಶನಿವಾರ ಮತದಾನ

ಶನಿವಾರ (ನ.25) ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಪಿಟಿಐ
Published 23 ನವೆಂಬರ್ 2023, 14:11 IST
Last Updated 23 ನವೆಂಬರ್ 2023, 14:11 IST
<div class="paragraphs"><p>ಅಶೋಕ್ ಗೆಹಲೋತ್‌, ಪ್ರಧಾನಿ ಮೋದಿ</p></div>

ಅಶೋಕ್ ಗೆಹಲೋತ್‌, ಪ್ರಧಾನಿ ಮೋದಿ

   

(ಚಿತ್ರ ಕೃಪೆ–ಪಿಟಿಐ)

ಜೈಪುರ: ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ‌ವಿಧಾನಸಭಾ ಚುನಾವಣೆಯ ಮತದಾನಕ್ಕಾಗಿ ಬಹಿರಂಗ ಪ್ರಚಾರ ಗುರುವಾರ ಸಂಜೆ ಕೊನೆಗೊಂಡಿತು.

ADVERTISEMENT

ಆಡಳಿತಾರೂಢ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರದಲ್ಲಿ ಮುಖ್ಯವಾಗಿ ಅಶೋಕ್ ಗೆಹಲೋತ್‌ ಸರ್ಕಾರದ ಯೋಜನೆಗಳ ಮೇಲೆ ಕೇಂದ್ರೀಕರಿಸಿದೆ. ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರೆ ಏಳು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಗೆಹಲೋತ್‌ ಸೇರಿದಂತೆ ಇತರರು ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಚುನಾವಣಾ ಪ್ರಚಾರದ ನೇತೃತ್ವ ವಹಿಸಿದ್ದು, ಬಿಕಾನೇರ್‌ ಮತ್ತು ಜೈಪುರದಲ್ಲಿ ರೋಡ್ ಶೋ ನಡೆಸಿದ್ದಾರೆ.

ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಕ್ಷೇತ್ರಗಳಿವೆ. ಶ್ರೀಗಂಗಾನಗರದ ಕರಣ್‌ಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೊನೂರ್ ನಿಧನರಾದ ಹಿನ್ನೆಲೆ 199 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 199 ವಿಧಾನಸಭಾ ಕ್ಷೇತ್ರಗಳಲ್ಲಿ 5,25,38,105 ಮತದಾರರಿದ್ದಾರೆ.

ಶನಿವಾರ(ನ.25) ಮತದಾನ

ಶನಿವಾರ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಡಿ.3 ರಂದು ಫಲಿತಾಂಶ ಪ್ರಕಟವಾಗಲಿದೆ. 'ನಿಯಮಾವಳಿ ಪ್ರಕಾರ ಚುನಾವಣಾ ಸಂಬಂಧಿತ ಸಾರ್ವಜನಿಕ ಸಭೆ, ಮೆರವಣಿಗೆ ಅಥವಾ ದೂರದರ್ಶನದಲ್ಲಿ ಪ್ರಚಾರ ನಡೆಸುವಂತಿಲ್ಲ. ಯಾವುದೇ ವ್ಯಕ್ತಿ ನಿಬಂಧನೆಗಳನ್ನು ಉಲ್ಲಂಘಿಸಿದರೆ, 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುವುದು' ಎಂದು ಮುಖ್ಯ ಚುನಾವಣಾ ಅಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.