ADVERTISEMENT

ಮೋದಿ ಸಿನಿಮಾಕ್ಕೆ ತಡೆ ನೀಡಲು ಸಾಧ್ಯವಿಲ್ಲ: ‘ಸುಪ್ರೀಂ’

ಪಿಟಿಐ
Published 8 ಏಪ್ರಿಲ್ 2019, 13:02 IST
Last Updated 8 ಏಪ್ರಿಲ್ 2019, 13:02 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಚರಿತ್ರೆ ಆಧಾರಿತ ಸಿನಿಮಾಗೆ ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರವನ್ನೇ ನೀಡಿಲ್ಲ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ಕೋರ್ಟ್‌ ಮಂಗಳವಾರಕ್ಕೆ ಮುಂದೂಡಿದೆ.

ಸಿನಿಮಾದಲ್ಲಿರುವ ಆಕ್ಷೇಪಾರ್ಹ ವಿಷಯಗಳ ಮಾಹಿತಿಯನ್ನು ಪುರಾವೆ ಸಮೇತ ಅರ್ಜಿದಾರರು ಕೋರ್ಟ್‌ಗೆಸಲ್ಲಿಸಿದರೆ ತಕ್ಷಣವೇ ಆದೇಶ ನೀಡಲಾಗುವುದು ಎಂದು ಕೋರ್ಟ್‌ ತಿಳಿಸಿದೆ.

ADVERTISEMENT

‘ಈ ಸಿನಿಮಾದ ಪ್ರತಿಯನ್ನು ನೀಡುವಂತೆ ನಾವು ಏಕೆ ನಿರ್ದೇಶಿಸಬೇಕು’ಎಂದು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠ ಪ್ರಶ್ನಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಸಿನಿಮಾದ ಬಿಡುಗಡೆಯನ್ನು ಪ್ರಶ್ನಿಸಲು ಯಾವುದೇ ಸಕಾರಣವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅರ್ಜಿದಾರರ ವಿಚಾರಣೆ ನಡೆಸಲು ನಿರಾಕರಿಸಿದ್ದರು.ಕಾಂಗ್ರೆಸ್ ಕಾರ್ಯಕರ್ತರೊಬ್ಬರು ‘ಪಿ.ಎಂ. ನರೇಂದ್ರ ಮೋದಿ’ ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.