ADVERTISEMENT

ಪಂಚ ರಾಜ್ಯಗಳಿಗೆ ಚುನಾವಣೆ; ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಸಬಹುದು!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2021, 16:24 IST
Last Updated 26 ಫೆಬ್ರುವರಿ 2021, 16:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯ/ಕೇಂದ್ರಡಾಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ.

ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯು ವಿಭಿನ್ನತೆಗಳಿಂದ ಕೂಡಿರಲಿದ್ದು, ಹಲವು ನಾವೀನ್ಯತೆಗಳಿಗೆ ಪಾತ್ರವಾಗಿದೆ.

ಇವುಗಳ ಪೈಕಿ ಈ ಬಾರಿ ಅಭ್ಯರ್ಥಿಗಳು ನಾಮಪತ್ರಗಳನ್ನು ಆನ್‌ಲೈನ್ ಮೂಲಕವೂ ಸಲ್ಲಿಸಹುದಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮಾಹಿತಿ ನೀಡಿದ್ದಾರೆ.

ADVERTISEMENT

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಕೋವಿಡ್-19 ಸುರಕ್ಷತಾ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಒಂದು ತಾಸು ಹೆಚ್ಚುವರಿ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದವರು ವಿವರಿಸಿದರು.

ಅಭ್ಯರ್ಥಿಗಳು ಚುನಾವಣಾ ಆಯೋಗ ಸಿದ್ಧಪಡಿಸಿದ ಸುವಿಧಾ ವೆಬ್‌ಸೈಟ್ ಮೂಲಕ ಇ-ನಾಮಪತ್ರವನ್ನು ಸಲ್ಲಿಸಬಹುದಾಗಿದೆ.

ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 2.7 ಲಕ್ಷ ಮತಗಟ್ಟೆಗಳಲ್ಲಿ 18.68 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.