ADVERTISEMENT

ಯೋಜನೆಗಳನ್ನು ಪ್ರತ್ಯೇಕವಾಗಿಯೇ ಪರಿಗಣಿಸಬೇಕು: ಸಚಿವ ನೀಲೇಶ್‌

ಗೋವಾ–ಕರ್ನಾಟಕ ಗಡಿಯಲ್ಲಿ ರೈಲು, ಹೆದ್ದಾರಿ ವಿಸ್ತರಣೆ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 17:01 IST
Last Updated 27 ಜನವರಿ 2021, 17:01 IST

ಪಣಜಿ: ಗೋವಾ ಮತ್ತು ಕರ್ನಾಟಕ ಗಡಿಯಲ್ಲಿ ಕೈಗೊಂಡಿರುವ ಜೋಡಿ ರೈಲು ಮಾರ್ಗ, ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಾಗೂ ವಿದ್ಯುತ್‌ ಮಾರ್ಗ ಯೋಜನೆಗಳನ್ನು ಪ್ರತ್ಯೇಕವಾಗಿಯೇ ನೋಡಬೇಕು. ಅವುಗಳನ್ನು ಒಂದೇ ಎಂದು ಪರಿಗಣಿಸಿ, ಅದರಿಂದಾಗುವ ಪರಿಣಾಮಗಳ ಮೌಲ್ಯಮಾಪನ ಮಾಡುವುದು ಸಲ್ಲ ಎಂದು ಗೋವಾ ಸಚಿವ ನೀಲೇಶ್‌ ಕಾಬ್ರಾಲ್‌ ಬುಧವಾರ ಹೇಳಿದರು.

ವಿಧಾನಸಭೆಯಲ್ಲಿ ಈ ವಿಷಯ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ‘ಈ ಯೋಜನೆಗಳ ಮರುಪರಿಶೀಲನೆ ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಈ ಯೋಜನೆಗಳಿಂದ ಪರಿಸರಕ್ಕೆ ಧಕ್ಕೆಯಾಗುತ್ತದೆ ಎಂದು ಆರೋಪಿ, ಪ್ರತಿಪಕ್ಷಗಳು ಹಾಗೂ ನಾಗರಿಕ ಸಂಘಟನೆಗಳು ಹೋರಾಟ ಕೈಗೊಂಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.