ADVERTISEMENT

ಜಾರ್ಖಂಡ್‌: ಬಸ್‌–ಕಾರು ಮುಖಾಮುಖಿ ಡಿಕ್ಕಿ, ಐವರು ಸಜೀವ ದಹನ

ಪಿಟಿಐ
Published 15 ಸೆಪ್ಟೆಂಬರ್ 2021, 6:46 IST
Last Updated 15 ಸೆಪ್ಟೆಂಬರ್ 2021, 6:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮಗಡ: ‘ಜಾರ್ಖಂಡ್‌ನ ರಾಮಗಡ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಬಸ್‌–ಕಾರು ಮುಖಾಮುಖಿ ಡಿಕ್ಕಿ ಹೊಡೆದುದರಿಂದ ಕಾರು ಭಸ್ಮವಾಗಿದ್ದು, ಅದರಲ್ಲಿದ್ದ ಐವರು ಸಜೀವ ದಹನರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ರಾಜರಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮುರಬಂದಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ–23 ರಲ್ಲಿ ಈ ಘಟನೆ ನಡೆದಿದೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆದಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.