
ಪ್ರಜಾವಾಣಿ ವಾರ್ತೆಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರ ಬೆಂಗಾವಲು ಪಡೆಯ ವಾಹನಗಳ ನಡುವೆ ಕಾರೊಂದು ನುಗ್ಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
‘ಆರೋಪಿಯು ವಿಧ್ವಂಸಕ ಕೃತ್ಯ ಎಸಗುವ ಉದ್ದೇಶ ಹೊಂದಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕಾರು ಚಾಲಕನನ್ನು ಬಂಧಿಸಿರುವ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ರಾಜ್ಯಪಾಲರು ಬಿಗಿ ಭದ್ರತೆ ಇರುವ ಸ್ಥಳದಲ್ಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯಪಾಲರು ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಗೆ ಭೇಟಿ ನೀಡಿ ಮಹಿಳೆಯೊಬ್ಬರ ಆರೋಪಗಳನ್ನು ಆಲಿಸಿದ ಮರುದಿನವೇ (ಮಂಗಳವಾರ) ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.