ADVERTISEMENT

‘ಆಜಾದ್ ಕಾಶ್ಮೀರ’: ಕೇರಳ ಶಾಸಕನ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 13:40 IST
Last Updated 24 ಆಗಸ್ಟ್ 2022, 13:40 IST

ತಿರುವನಂತಪುರ:ಜಮ್ಮು ಕಾಶ್ಮೀರವನ್ನು ‘ಭಾರತ ಆಕ್ರಮಿತ ಕಾಶ್ಮೀರ’ ಮತ್ತು ಪಾಕ್ ಆಕ್ರಮಿತ ಕಾಶ್ಮೀರವನ್ನು ‘ಆಜಾದ್ ಕಾಶ್ಮೀರ’ ಎಂದು ಉಲ್ಲೇಖಿಸಿದ ಕಾರಣಕ್ಕೆ ಕೇರಳದ ಎಡಪಕ್ಷದ ಶಾಸಕ ಕೆ. ಟಿ. ಜಲೀಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಭಾವೈಕ್ಯತೆ ಮತ್ತು ರಾಷ್ಟ್ರೀಯ ಗೌರವಕ್ಕೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪತ್ತನಂತಿಟ್ಟ ಜಿಲ್ಲೆಯ ಕೀಜ್‌ವೈಪುರ್ ಪೊಲೀಸರುಪ್ರಕರಣ ದಾಖಲಿಸಿದ್ದಾರೆ. ‌ಆರ್‌ಎಸ್‌ಎಸ್ ಕಾರ್ಯಕರ್ತನ ಅರ್ಜಿ ಪರಿಗಣಿಸಿ ಪ್ರಕರಣ ದಾಖಲಿಸುವಂತೆ ಸ್ಥಳೀಯ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.

ಕೇರಳದ ಮಾಜಿ ಉನ್ನತ ಶಿಕ್ಷಣ ಸಚಿವರಾಗಿದ್ದ ಜಲೀಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರವಾಸ ಕಥನದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 370ನೇ ವಿಧಿ ರದ್ದತಿಯನ್ನು ಸಹ ಖಂಡಿಸಿದರು. ವಿವಾದದ ನಂತರ ವಿವಾದಾತ್ಮಕ ಭಾಗಗಳನ್ನು ತೆಗೆದುಹಾಕಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.