ಮುಂಬೈ : ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿಸಿ ಇಲ್ಲಿನ ನಾಗಪಾಡದಲ್ಲಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿರುವ 300 ಮಹಿಳೆಯರು ಮತ್ತು ಆಯೋಜಕರ ವಿರುದ್ಧ ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)ಪ್ರಕರಣ ದಾಖಲಿಸಿದೆ.
ರಸ್ತೆಯಲ್ಲಿಯೇ ಪ್ರತಿಭಟನೆಯನ್ನು ನಡೆಸುತ್ತಿರುವುದರಿಂದ ನಾಗರಿಕರಿಗೆ ಮತ್ತು ಪಾಲಿಕೆ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗಿದೆ. ಮೊರ್ಲ್ಯಾಂಡ್ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಪಾಲಿಕೆಯು ದೂರಿನಲ್ಲಿ ಉಲ್ಲೇಖಿಸಿದೆ ಎಂದು ನಾಗಪಾಡ ಪೊಲೀಸ್ ಠಾಣೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಗಪಾಡದಲ್ಲಿ ಕಳೆದ ಜ.26ರಿಂದ ಮಹಿಳೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಇದು ಮುಂಬೈನ ಶಾಹೀನ್‌ಬಾಗ್ ಎಂದೇ ಹೆಸರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.