ADVERTISEMENT

5ನೇ ತರಗತಿ ವಿದ್ಯಾರ್ಥಿನಿಯನ್ನು ಥಳಿಸಿದ ಶಿಕ್ಷಕಿಯ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2025, 4:20 IST
Last Updated 25 ಮಾರ್ಚ್ 2025, 4:20 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಮುಂಬೈ: ಮುಂಬೈನ ಶಾಲೆಯೊಂದರ ತರಗತಿಯಲ್ಲಿ ಮಾತನಾಡಿದ ಕಾರಣಕ್ಕಾಗಿ 11 ವರ್ಷದ ವಿದ್ಯಾರ್ಥಿನಿಯನ್ನು ಥಳಿಸಿದ ಆರೋಪದ ಮೇಲೆ ಶಿಕ್ಷಕಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಚೆಂಬೂರ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಾರ್ಚ್ 21ರಂದು ಶಿಕ್ಷಕಿ 5ನೇ ತರಗತಿ ವಿದ್ಯಾರ್ಥಿನಿಯ ಮಣಿಕಟ್ಟು, ಬೆನ್ನು ಮತ್ತು ಸೊಂಟಕ್ಕೆ ಬೆತ್ತದಿಂದ ಹಲವು ಬಾರಿ ಹೊಡೆದಿದ್ದು, ಗಾಯಗಳಾಗಿವೆ ಎಂದು ಬಾಲಕಿಯ ತಂದೆ ನೀಡಿದ ದೂರನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿನಿ ಹಿಂದೆ ನೋಡುತ್ತಿದ್ದಳು. ಆದರೆ, ತರಗತಿಯಲ್ಲಿ ಮಾತನಾಡುತ್ತಿದ್ದಾಳೆ ಎಂದು ಆರೋಪಿಸಿ ಶಿಕ್ಷಕಿ ಬಾಲಕಿಗೆ ಶಿಕ್ಷೆ ವಿಧಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಮತ್ತು ಬಾಲ ನ್ಯಾಯ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.