ADVERTISEMENT

ರಾಷ್ಟ್ರಧ್ವಜಕ್ಕೆ ಅಪಮಾನ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು

ಪಿಟಿಐ
Published 14 ಸೆಪ್ಟೆಂಬರ್ 2021, 16:49 IST
Last Updated 14 ಸೆಪ್ಟೆಂಬರ್ 2021, 16:49 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ   

ಮುಜಾಫರ್‌ನಗರ (ಬಿಹಾರ): ಆಗಸ್ಟ್ 22ರಂದು ಲಖನೌದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರ ಧ್ವಜವನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಮುಜಾಫರ್‌ಪುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಂತ್ಯಕ್ರಿಯೆಗೂ ಮುನ್ನ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಧ್ವಜವನ್ನು ಇಟ್ಟಿದ್ದರಿಂದ ಅವರು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

'ಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದೆ... ನಡ್ಡಾ ಅವರ ಈ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ' ಎಂದು ದೂರಿರುವ ಅರ್ಜಿದಾರರು, ತಮ್ಮ ಅರ್ಜಿಗೆ ಪೂರಕವಾಗಿ ಕೆಲವು ಚಿತ್ರಗಳನ್ನು ಸಹ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಕುರಿತು ನ್ಯಾಯಾಲಯ ದಿನಾಂಕ ನಿಗದಿಪಡಿಸಿಲ್ಲ.

ADVERTISEMENT

ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಇರಿಸಿದ್ದಕ್ಕಾಗಿ ಉತ್ತರ ಪ್ರದೇಶ ಕಾಂಗ್ರೆಸ್ ಕೂಡ ಟೀಕಿಸಿದೆ. ಯುಪಿ ಕಾಂಗ್ರೆಸ್ ವಕ್ತಾರ ಅಮರನಾಥ ಅಗರ್ವಾಲ್ ಮಾತನಾಡಿ, 'ಬಿಜೆಪಿ ನಾಯಕರು ಯಾವಾಗಲೂ ರಾಷ್ಟ್ರಕ್ಕಿಂತ ಮೇಲಿರುವುದರಂತೆ ವರ್ತಿಸುತ್ತಾರೆ. ಈ ಘಟನೆಯು ಅವರ ಮನಸ್ಥಿತಿಯನ್ನು ತೋರಿಸುತ್ತದೆ' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.