ADVERTISEMENT

ನಮಾಜ್ ನಿಷೇಧಕ್ಕೆ ಆಗ್ರಹಿಸಿದ ಹಿಂದೂ ಮಹಾಸಭಾ ನಾಯಕಿ ವಿರುದ್ಧ ಪ್ರಕರಣ ದಾಖಲು

ಐಎಎನ್ಎಸ್
Published 7 ಜೂನ್ 2022, 7:07 IST
Last Updated 7 ಜೂನ್ 2022, 7:07 IST
ಪೂಜಾ ಶಕುನ್ ಪಾಂಡೆ – Credit: Twitter/@ShakunPooja
ಪೂಜಾ ಶಕುನ್ ಪಾಂಡೆ – Credit: Twitter/@ShakunPooja   

ಲಖನೌ: ನಮಾಜ್ ನಿಷೇಧಿಸಬೇಕು ಎಂದು ಹೇಳಿಕೆ ನೀಡಿದ ‘ಅಖಿಲ ಭಾರತೀಯ ಹಿಂದೂ ಮಹಾಸಭಾ’ದ ರಾಷ್ಟ್ರೀಯ ಕಾರ್ಯದರ್ಶಿ ಮಹಾಮಂಡಲೇಶ್ವರ್ ಅನ್ನಪೂರ್ಣ ಭಾರತಿ ಅಲಿಯಾಸ್ ಪೂಜಾ ಶಕುನ್ ಪಾಂಡೆ ವಿರುದ್ಧ ಅಲೀಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂಜಾ ಶಕುನ್ ಪಾಂಡೆಗೆ ಅಲೀಗಡದ ಹೆಚ್ಚುವರಿ ನಗರ ಮ್ಯಾಜಿಸ್ಟ್ರೇಟರು ನೋಟಿಸ್ ನೀಡಿದ್ದಾರೆ.

ನೋಟಿಸ್‌ಗೆ ಉತ್ತರಿಸಿರುವ ಪಾಂಡೆ, ಸತ್ಯವನ್ನು ಹೇಳಿದ್ದರಿಂದ ಯಾವುದೇ ಧರ್ಮದವರ ಭಾವನೆಗಳಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯು ಪ್ರಚೋದನಾಕಾರಿಯಲ್ಲ ಎಂದೂ ಅವರು ಸಮರ್ಥಿಸಿಕೊಂಡಿದ್ದಾರೆ.

ADVERTISEMENT

‘ಪೂಜಾ ಶಕುನ್ ಪಾಂಡೆ ವಿರುದ್ಧ ಅಲೀಗಡದ ಗಾಂಧಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ, 153ಬಿ, 295ಎ ಹಾಗೂ 505ರ ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಅಲೀಗಡ ಎಸ್‌ಎಸ್‌ಪಿ ಕಲಾನಿಧಿ ನೈಥನಿ ತಿಳಿಸಿದ್ದಾರೆ.

‘ತನಿಖೆ ನಡೆಯುತ್ತಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರ ಹೊರತಾಗಿ, ಸಂಬಂಧಪಟ್ಟ ಮ್ಯಾಜಿಸ್ಟ್ರೇಟರೂ ನೋಟಿಸ್ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಪಾಂಡೆ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ‘ಅಖಿಲ ಭಾರತೀಯ ಹಿಂದೂ ಮಹಾಸಭಾ’ದ ರಾಷ್ಟ್ರೀಯ ವಕ್ತಾರ ಅಶೋಕ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.