ADVERTISEMENT

ಉತ್ತರ ಪ್ರದೇಶದ ಶಿಯಾ ವಕ್ಫ್‌ ಮಂಡಳಿ ಮಾಜಿ ಅಧ್ಯಕ್ಷರ ವಿರುದ್ಧ ಒವೈಸಿ ದೂರು

ಧಾರ್ಮಿಕ ಭಾವನೆಗಳಿಗೆ ಧಕ್ಕೆ

ಪಿಟಿಐ
Published 18 ನವೆಂಬರ್ 2021, 5:56 IST
Last Updated 18 ನವೆಂಬರ್ 2021, 5:56 IST
ಅಸಾದುದ್ದೀನ್ ಒವೈಸಿ
ಅಸಾದುದ್ದೀನ್ ಒವೈಸಿ   

ಹೈದರಾಬಾದ್‌: ತಮ್ಮ ಪುಸ್ತಕದಲ್ಲಿ ಆಕ್ಷೇಪಣಾರ್ಹ ವಿಷಯಗಳನ್ನು ಸೇರಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪದ ಮೇಲೆಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ನೀಡಿದ ದೂರಿನ ಅನ್ವಯ, ರಿಜ್ವಿ ಮತ್ತು ಅವರ ಸಹಚರರ ವಿರುದ್ಧ 153ಎ (ಧರ್ಮವನ್ನು ಆಧರಿಸಿ ಜನರ ನಡುವೆ ದ್ವೇಷ ಬಿತ್ತುವುದು), 295ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತಿತರ ಐಪಿಸಿ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ರಿಜ್ವಿ ಅವರು ಹಿಂದಿಯಲ್ಲಿ ಬರೆದಿರುವ ಪುಸ್ತಕದಲ್ಲಿ ಇಸ್ಲಾಂ ಮತ್ತು ಅದರ ಅನುಯಾಯಿಗಳ ವಿರುದ್ಧ ಆಕ್ಷೇಪಾರ್ಹ ಭಾಷೆಗಳನ್ನು ಬಳಸಿದ್ದಾರೆ’ ಎಂದು ಆರೋಪಿಸಿ ಸಂಸದ ಅಸಾಸುಸದ್ದೀನ್‌ ಅವರು ಹೈದರಾಬಾದ್ ಪೊಲೀಸ್ ಆಯುಕ್ತ ಅಂಜನಿ ಕುಮಾರ್‌ ಅವರಿಗೆ ಬುಧವಾರ ದೂರು ನೀಡಿದ್ದಾರೆ.

ADVERTISEMENT

‘ಪ್ರವಾದಿ ಮೊಹಮ್ಮದ್ ಅವರನ್ನು ಅನುಸರಿಸುವ ಮತ್ತು ಇಸ್ಲಾಮಿಕ್ ತತ್ವಗಳನ್ನು ಪಾಲಿಸುವವರ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ರೀತಿಯಲ್ಲಿ ಪುಸ್ತಕ ಇದೆ’ ಎಂದು ಒವೈಸಿ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.