ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಆರೋಪಗಳ ಬಗ್ಗೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಸಮಿತಿ ನೀಡಿರುವ ವರದಿಯನ್ನು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲು ಕೇಂದ್ರ ಸರ್ಕಾರ ಹಂಚಿಕೊಂಡರೆ ಅವರ ವಿರುದ್ಧ ವಾಗ್ದಂಡನೆ ನಿಲುವಳಿಗೆ ಬೆಂಬಲ ನೀಡುವ ಬಗ್ಗೆ ನಿರ್ಧರಿಸಬಹುದು ಎಂದು ಕಾಂಗ್ರೆಸ್ ಹೇಳಿದೆ.
ಜುಲೈ 21ರಂದು ಆರಂಭಗೊಳ್ಳಲಿರುವ ಮುಂಗಾರು ಅಧಿವೇಶನದಲ್ಲಿ ಯಶವಂತ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಎಲ್ಲ ಪಕ್ಷಗಳೊಂದಿಗೆ ಚರ್ಚೆ ಆರಂಭಿಸಿದ್ದಾರೆ.
‘ಸಮಿತಿಯ ವರದಿಯನ್ನು ನೀಡುವಂತೆ ಕಿರಣ್ ರಿಜಿಜು ಅವರಿಗೆ ಪಕ್ಷ ಆಗ್ರಹಿಸಿದೆ. ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನ್ಯಾಯಮೂರ್ತಿ ವರ್ಮಾ ಅವರು ದೆಹಲಿ ಹೈಕೋರ್ಟ್ ನ್ಯಾಯಾಮೂರ್ತಿಯಾಗಿದ್ದ ಸಂದರ್ಭದಲ್ಲಿ ಅವರ ಅಧಿಕೃತ ನಿವಾಸದಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿದ್ದವು. ಈ ಸಂಬಂಧ ತನಿಖೆಗೆ ಸುಪ್ರೀಂಕೋರ್ಟ್ ಸಮಿತಿಯನ್ನು ರಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.