ADVERTISEMENT

ಜಾತಿ ಆಧಾರಿತ ಜನಗಣತಿಯನ್ನು ಬಿಜೆಪಿ ವಿರೋಧಿಸುತ್ತಿದೆ: ಅಶೋಕ್‌ ಚವಾಣ್‌

ಪಿಟಿಐ
Published 28 ಡಿಸೆಂಬರ್ 2023, 14:31 IST
Last Updated 28 ಡಿಸೆಂಬರ್ 2023, 14:31 IST
<div class="paragraphs"><p> ಅಶೋಕ್‌ ಚವಾಣ್‌ </p></div>

ಅಶೋಕ್‌ ಚವಾಣ್‌

   

ಮುಂಬೈ: ಜಾತಿ ಆಧಾರಿತ ಜನಗಣತಿಯು ಉತ್ತಮ ಸಾಮಾಜಿಕ ನ್ಯಾಯವನ್ನು ಒದಗಿಸುತ್ತದೆ. ಆದರೆ, ಬಿಜೆಪಿ ಇದನ್ನು ವಿರೋಧಿಸುತ್ತಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಆರೋಪಿಸಿದರು.

ನಾಗಪುರದಲ್ಲಿ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನದ ಸ್ಮರಣಾರ್ಥ ಆಯೋಜಿಸಲಾಗಿದ್ದ ಕಾಂಗ್ರೆಸ್‌ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷವು ಇಡೀ ದೇಶದಲ್ಲಿ ಜಾತಿ ಆಧಾರಿತ ಜನಗಣತಿಯನ್ನು ಬಯಸುತ್ತದೆ ಎಂದು ತಿಳಿಸಿದರು.

ADVERTISEMENT

‘ಮೀಸಲಾತಿ ಮೇಲಿನ ಶೇಕಡ 50ರ ಮಿತಿಯನ್ನು ತೆಗೆದುಹಾಕಬೇಕು ಎಂಬುದು ಕಾಂಗ್ರೆಸ್‌ನ ನಿಲುವು. ಮೀಸಲಾತಿ ಕುರಿತು ರಾಜ್ಯಗಳಲ್ಲಿರುವ ಎಲ್ಲ ಸಮಸ್ಯೆಗಳಿಗೆ ಜಾತಿ ಆಧಾರಿತ ಜನಗಣತಿಯಿಂದ ಪರಿಹಾರ ಸಿಗುತ್ತದೆ. ಆದರೆ ಬಿಜೆಪಿ ಈ ಕ್ರಮವನ್ನು ವಿರೋಧಿಸುತ್ತಿದೆ’ ಎಂದು ಅವರು ಹೇಳಿದರು.

ಜಾತಿಗಣತಿಯಂತಹ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನಗಳು ನಡೆದಿವೆ. ಅಲ್ಲದೆ, ಈಗಿನ ಮೀಸಲಾತಿ ಹಂಚಿಕೆ ರಾಜ್ಯದಲ್ಲಿ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ದ ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸಿರುವುದು ವ್ಯರ್ಥ ಎಂಬುದು ಜನರಿಗೆ ತಿಳಿದಿದೆ. ಅನೇಕರು ಭಾರತವನ್ನು ಕಾಂಗ್ರೆಸ್‌ ಮುಕ್ತ ದೇಶವನ್ನಾಗಿ ಮಾಡಬೇಕೆಂದು ಹೇಳಿದರು. ಅಂತಹವರ ಬಗ್ಗೆ ಯಾವುದೇ ಸುದ್ದಿಯಿಲ್ಲ. ಆದರೆ, ಕಾಂಗ್ರೆಸ್‌ ಪಕ್ಷವು ಹಾಗೇ ಉಳಿದಿದೆ ಎಂಬುದನ್ನು ಯಾರೂ ಮರೆಯಬಾರದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.