ADVERTISEMENT

ಜಾತಿ ಗಣತಿಗೆ ಆಡಳಿತಾತ್ಮಕ ತೊಡಕು: ಕೇಂದ್ರದ ಮಾಹಿತಿ

ಪಿಟಿಐ
Published 23 ಸೆಪ್ಟೆಂಬರ್ 2021, 22:14 IST
Last Updated 23 ಸೆಪ್ಟೆಂಬರ್ 2021, 22:14 IST

ನವದೆಹಲಿ: ಹಿಂದುಳಿದ ವರ್ಗಗಳ ಜಾತಿ ಗಣತಿಯು ಆಡಳಿತಾತ್ಮಕವಾಗಿ ಕಷ್ಟಕರ, ತೊಡಕಾಗಿದೆ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಅಂತಹ ಮಾಹಿತಿಯನ್ನು ಜನಗಣತಿ ವ್ಯಾಪ್ತಿಯಿಂದ ಹೊರಗಿಡುವುದು ಒಂದು ಪ್ರಜ್ಞಾಪೂರ್ವಕ ನಿರ್ಧಾರವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

2011ರ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯು (ಎಸ್‌ಇಸಿಸಿ) ಸುಳ್ಳು ಮತ್ತು ತಪ್ಪುಗಳಿಂದ ಕೂಡಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿದೆ.ಇತರ ಹಿಂದುಳಿದ ವರ್ಗಗಳ 2011ರ ಎಸ್‌ಇಸಿಸಿಯ ದತ್ತಾಂಶವನ್ನು ಬಹಿರಂಗಪಡಿಸಲು ಕೇಂದ್ರ ಮತ್ತು ಇತರ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಪ್ರಮಾಣಪತ್ರ ಸಲ್ಲಿಸಿದೆ.

ADVERTISEMENT

ಹಿಂದುಳಿದ ವರ್ಗಗಳ ನಾಗರಿಕರ ಗಣತಿಯನ್ನು ಆಡಳಿತಾತ್ಮಕವಾಗಿ ಅತ್ಯಂತ ಸಂಕೀರ್ಣ ಎಂದು ಪರಿಗಣಿಸಲಾಗುತ್ತದೆ. ಸ್ವಾತಂತ್ರ್ಯಪೂರ್ವದಲ್ಲಿ ಜಾತಿ ಗಣತಿಯನ್ನು ಕೈಗೊಂಡಾಗಲೂ ದತ್ತಾಂಶಗಳು ನಿಖರವಾಗಿಲ್ಲ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.