ADVERTISEMENT

ಜಾತಿ ದತ್ತಾಂಶ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 16:06 IST
Last Updated 2 ಫೆಬ್ರುವರಿ 2026, 16:06 IST
.
.   

ನವದೆಹಲಿ: 2027ರ ಜನಗಣತಿಯಲ್ಲಿ ನಾಗರಿಕರ ಜಾತಿ ದತ್ತಾಂಶ ದಾಖಲಿಸಲು, ವರ್ಗೀಕರಿಸಲು ಮತ್ತು ಪರಿಶೀಲಿಸಲು ಅಳವಡಿಸಿಕೊಳ್ಳಬೇಕಾದ ವಿಧಾನವನ್ನು ಪ್ರಶ್ನಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಸೋಮವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಅರ್ಜಿದಾರ ಆಕಾಶ್ ಗೋಯಲ್ ಅವರ ಸಲಹೆಗಳನ್ನು ಪರಿಗಣಿಸುವಂತೆ, ಕೇಂದ್ರ ಸರ್ಕಾರ ಹಾಗೂ ರಿಜಿಸ್ಟ್ರಾರ್‌ ಜನರಲ್‌ ಮತ್ತು ಜನಗಣತಿ ಆಯುಕ್ತರ ಕಚೇರಿಗೆ ಸೂಚಿಸಿದೆ.