ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕಲಿ ಕೋವಿಡ್–19 ಪರೀಕ್ಷಾ ಕಿಟ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಎಲ್ಲ ರಾಜ್ಯಗಳ ಪೊಲೀಸ್ ಇಲಾಖೆಗಳಿಗೆ ಸಿಬಿಐ ಎಚ್ಚರಿಸಿದೆ.
ಇಂಟರ್‌ಪೋಲ್ ನೀಡಿದ ಮಾಹಿತಿ ಅನ್ವಯ ಸಿಬಿಐ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.
‘ಒಟ್ಟು 194 ಸದಸ್ಯ ರಾಷ್ಟ್ರಗಳಿಗೆ ಇಂಟರ್‌ಪೋಲ್ ಈ ಎಚ್ಚರಿಕೆಯ ಸಂದೇಶ ನೀಡಿದೆ. ಭಾರತ ಮೂಲದ ಕಂಪನಿ ಅಥವಾ ವಿತರಕರ ಕುರಿತು ಮಾಹಿತಿ ಇಲ್ಲ’ ಎಂದು ಇವೇ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.