ADVERTISEMENT

ದೆಹಲಿ ಅಬಕಾರಿ ನೀತಿ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಸಿಬಿಐ

ಪಿಟಿಐ
Published 10 ಅಕ್ಟೋಬರ್ 2022, 6:56 IST
Last Updated 10 ಅಕ್ಟೋಬರ್ 2022, 6:56 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಅಭಿಷೇಕ್‌ ಬೊಯಿನಪಲ್ಲಿ ಎಂಬುವವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಈ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರೂ ಆರೋಪಿಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಪ್ರಕರಣದ ಆರೋಪಿಯಾಗಿರುವಅಭಿಷೇಕ್‌ ಬೊಯಿನಪಲ್ಲಿಅವರನ್ನು ಭಾನುವಾರ ವಿಚಾರಣೆಗೆ ಕರೆಯಲಾಗಿತ್ತು.ಆದರೆ, ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡದೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಹೀಗಾಗಿ ತಡರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮದ್ಯದ ಬೆಲೆ ಅಥವಾ ಷೇರು ಹಂಚಿಕೆಯ ನಿಯಂತ್ರಣ ಹಾಗೂ ದಕ್ಷಿಣದ ಉದ್ಯಮಿಗಳಿಗಾಗಿಅಭಿಷೇಕ್‌ ಲಾಬಿ ನಡೆಸುತ್ತಿದ್ದರು ಎಂದೂ ತಿಳಿಸಿದ್ದಾರೆ.

ADVERTISEMENT

ಅಭಿಷೇಕ್‌ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಎರಡನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮೊದಲುಉದ್ಯಮಿ ಹಾಗೂ ಎಎಪಿ ನಾಯಕ ವಿಜಯ್‌ ನಾಯರ್‌ ಅವರನ್ನು ಬಂಧಿಸಲಾಗಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಸರ್ಕಾರ ರೂಪಿಸಿದ್ದ ಅಬಕಾರಿ ನೀತಿಯಲ್ಲಿ ವ್ಯಾಪಕ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಸರ್ಕಾರವು ನೀತಿಯನ್ನು ಹಿಂಪಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.