ಬಂಧನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ಸೌದಿ ಅರೇಬಿಯಾದಲ್ಲಿ 1999ರಲ್ಲಿ ನಡೆದಿದ್ದ ಹತ್ಯೆ ಪ್ರಕರಣದ ಆರೋಪಿಯನ್ನು ಸಿಬಿಐ ಈ ವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.
ಆರೋಪಿ ಮಹಮ್ಮದ್ ದಿಲ್‌ಶಾದ್ ಮದೀನಾದಿಂದ ವಾಪಸ್ ಬರುವಾಗ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11ರಂದು ಬಂಧಿಸಲಾಗಿದೆ ಸಿಬಿಐ ವಕ್ತಾರರು ತಿಳಿಸಿದ್ದಾರೆ.
‘ಆರೋಪಿಯನ್ನು ಪತ್ತೆಹಚ್ಚಿ, ಸ್ಥಳೀಯವಾಗಿ ಕಾನೂನು ಕ್ರಮ ಜರುಗಿಸುವಂತೆ ಸೌದಿ ಅರೇಬಿಯಾ ಸರ್ಕಾರ ಮಾಡಿದ್ದ ಮನವಿಯ ಮೇರೆಗೆ 2022ರಲ್ಲಿ ಸಿಬಿಐ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು’ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.