
ಪಿಟಿಐ
ನವದೆಹಲಿ: ಆಸ್ತಿಯ ಬಗ್ಗೆ ಅನುಕೂಲಕರ ಪರಿಶೀಲನಾ ವರದಿ ಸಲ್ಲಿಸಲು ₹2.4 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಜ್ಯೋತಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಪಾಟೀಲ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ದೆಹಲಿಯ ಕಢಕಢಡೂಮಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವೊಂದರಲ್ಲಿ ಆಸ್ತಿಯ ಬಗ್ಗೆ ಅನುಕೂಲ ಮಾಡಿಕೊಡುವ ರೀತಿಯ ಪರಿಶೀಲನಾ ವರದಿ ಸಲ್ಲಿಸಲು ಎಎಸ್‌ಐ ₹15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡದಿದ್ದರೆ ದೂರುದಾರರ ವಿರುದ್ಧ ಪ್ರತಿಕೂಲ ವರದಿ ನೀಡುವುದಾಗಿ ಬೆದರಿಕೆಯನ್ನೂ ಹಾಕಿದ್ದರು ಎಂದು ಸಿಬಿಐ ವಕ್ತಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.