ADVERTISEMENT

ಭ್ರಷ್ಟಾಚಾರ: ಸಫ್ದರ್‌ಜಂಗ್‌ ಆಸ್ಪತ್ರೆಯ ನರರೋಗ ತಜ್ಞ ಬಂಧನ

ಪಿಟಿಐ
Published 30 ಮಾರ್ಚ್ 2023, 14:04 IST
Last Updated 30 ಮಾರ್ಚ್ 2023, 14:04 IST
.
.   

ನವದೆಹಲಿ: ಲಂಚ ಮತ್ತು ಭ್ರಷ್ಟಾಚಾರ ಆರೋಪದಡಿ ಕೇಂದ್ರ ತನಿಖಾ ದಳದ ಅಧಿಕಾರಿಗಳು (ಸಿಬಿಐ) ಸಫ್ದರ್‌ಜಂಗ್‌ ಆಸ್ಪತ್ರೆಯ ನರರೋಗ ತಜ್ಞ ಮನೀಶ್‌ ರಾವತ್‌ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಇವರು ರೋಗಿಗಳನ್ನು ನಿರ್ದಿಷ್ಟ ಕಂಪನಿಗಳ ಹೆಚ್ಚಿನ ಬೆಲೆಯ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಖರೀದಿಸುವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ತನಿಖಾ ಸಂಸ್ಥೆಯು ಮನೀಶ್‌ ಅವರಿಗೆ ನಂಟು ಹೊಂದಿರುವ ದೆಹಲಿ ಮತ್ತು ಉತ್ತರ ಪ್ರದೇಶದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಅನೈತಿಕ ಸಂಬಂಧಗಳನ್ನೂ ಭೇದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ರೋಗಿಗಳಿಂದ ಸಮಾಲೋಚನೆ ಮತ್ತು ಶಸ್ತ್ರಚಿಕಿತ್ಸೆಗೂ ಹೆಚ್ಚಿನ ಹಣವನ್ನು ವಸೂಲಿ ಮಾಡಲಾಗುತ್ತಿತ್ತು. ಅಲ್ಲದೆ ಮಧ್ಯವರ್ತಿಗಳ ಮೂಲಕ ₹ 30 ಸಾವಿರದಿಂದ ₹ 1.15 ಲಕ್ಷದವರೆಗೂ ಹಣವನ್ನು ಬ್ಯಾಂಕ್‌ ಖಾತೆಗೆ ಹಾಕಿಸಿಕೊಳ್ಳಲಾಗುತ್ತಿತ್ತು ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.