ADVERTISEMENT

ಭ್ರಷ್ಟಾಚಾರ: ದೆಹಲಿ ಸಾರಿಗೆ ಇಲಾಖೆಯ ಆರು ಅಧಿಕಾರಿಗಳನ್ನು ಬಂಧಿಸಿದ ಸಿಬಿಐ

ಪಿಟಿಐ
Published 12 ಫೆಬ್ರುವರಿ 2025, 5:02 IST
Last Updated 12 ಫೆಬ್ರುವರಿ 2025, 5:02 IST
ಸಿಬಿಐ
ಸಿಬಿಐ   

ನವದೆಹಲಿ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಾರಿಗೆ ಇಲಾಖೆಯ ಆರು ಅಧಿಕಾರಿಗಳನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ. ಆಮ್‌ ಆದ್ಮಿ ಪಕ್ಷವು (ಎಎಪಿ) ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಸಿಬಿಐ ನಡೆಸಿದ ಮೊದಲ ಪ್ರಮುಖ ಕಾರ್ಯಾಚರಣೆ ಇದಾಗಿದೆ.

ಈ ಕುರಿತು ಬುಧವಾರ ಮಾಹಿತಿ ನೀಡಿರುವ ಅಧಿಕಾರಿಗಳು, ಸಾರಿಗೆ ಇಲಾಖೆಯಲ್ಲಿನ ವ್ಯಾಪಕ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ ಎಂದು ತಿಳಿಸಿದ್ದಾರೆ.

ಬಂಧನಕ್ಕೂ ಮುನ್ನ, ಸಿಸಿಟಿವಿ ಕಣ್ಗಾವಲು ಮೂಲಕ ದೂರುಗಳ ಸತ್ಯಾಸತ್ಯತೆ ಪರಿಶೀಲಿಸಲು ನಿರ್ಧರಿಸಲಾಗಿತ್ತು ಎಂದು ಹೇಳಿದ್ದಾರೆ.

ADVERTISEMENT

ವಿವಿಧ ಹಂತಗಳಲ್ಲಿ ಭ್ರಷ್ಟಾಚಾರ ನಡೆದಿರುವುದು ದೂರುಗಳ ಪರಿಶೀಲನೆ ವೇಳೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅದರಂತೆ, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.