ADVERTISEMENT

ಏರ್ ಇಂಡಿಯಾ ಮಾಜಿ ಮುಖ್ಯಸ್ಥ ಜಾಧವ್ ವಿರುದ್ಧ ಎಫ್‌ಐಆರ್

ನೇಮಕಾತಿ, ಬಡ್ತಿಯಲ್ಲಿ ನಿಯಮ ಉಲ್ಲಂಘನೆ ಆರೋಪ

ಪಿಟಿಐ
Published 23 ಜನವರಿ 2019, 18:21 IST
Last Updated 23 ಜನವರಿ 2019, 18:21 IST
ಅರವಿಂದ್ ಜಾಧವ್
ಅರವಿಂದ್ ಜಾಧವ್   

ನವದೆಹಲಿ: ಬಡ್ತಿ ನೀಡಿಕೆ ಹಾಗೂ ನೇಮಕಾತಿ ವೇಳೆ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಏರ್ ಇಂಡಿಯಾ ಮಾಜಿ ಮುಖ್ಯಸ್ಥ ಅರವಿಂದ್ ಜಾಧವ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಪಿ ನಖ್ವಾ (ಸಿಬ್ಬಂದಿ ವಿಭಾಗ), ಹೆಚ್ಚುವರಿ ಜನರಲ್ ಮ್ಯಾನೇಜರ್‌ಗಳಾದ (ಕಾರ್ಯಾಚರಣೆ), ಎ.ಕಠಪಾಲಿಯಾ, ಅಮಿತಾಭ್ ಸಿಂಗ್ ಮತ್ತು ರೋಹಿತ್ ಭಾಸಿನ್ ಅವರ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ಕ್ರಿಮಿನಲ್ ಸಂಚಿಗೆ ಸಂಬಂಧಿಸಿದ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ADVERTISEMENT

ಅಧಿಕಾರಿಗಳನ್ನು ಜನರಲ್ ಮ್ಯಾನೇಜರ್ ಹುದ್ದೆಗೆ ಬಡ್ತಿ ನೀಡುವ ಉದ್ದೇಶದಿಂದ 2010ರಲ್ಲಿ ಸಮಿತಿಯೊಂದನ್ನು ರಚಿಸಿದ್ದ ಜಾಧವ್, ನಿಯಮಾವಳಿಗಳನ್ನು ಉಲ್ಲಂಘಿಸಿದ್ದರು ಎಂದು ಸಿಬಿಐ ಆರೋಪಿಸಿದೆ.

ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಆರೋಗ್ಯ ಸೇವೆ) ನಖ್ವಾ ಅವರನೇಮಕಾತಿಯನ್ನು ನಾಗರಿಕ ವಿಮಾನಯಾನ ಸಚಿವಾಲಯ ಅನೂರ್ಜಿತಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.