ADVERTISEMENT

ಜೆಇಇ ಮುಖ್ಯ ಪರೀಕ್ಷೆಯಲ್ಲಿ ಅಕ್ರಮ: 20 ಸ್ಥಳಗಳಲ್ಲಿ ಸಿಬಿಐ ಶೋಧ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 15:42 IST
Last Updated 2 ಸೆಪ್ಟೆಂಬರ್ 2021, 15:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಜೆಇಇ ಮುಖ್ಯ ಪರೀಕ್ಷೆಯಲ್ಲಿ ನಡೆಸಿರುವ ಅಕ್ರಮಗಳ ಆರೋಪದ ಮೇಲೆ ಸಿಬಿಐ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿದೆ.

ಈ ಸಂಬಂಧ ಗುರುವಾರ ದೆಹಲಿ, ಪುಣೆ, ಜೆಮ್‌ಶೆಡ್‌ಪುರ ಸೇರಿ ದೇಶದಾದ್ಯಂತ 20 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರು, ಅವರ ಸಹದ್ಯೋಗಿಗಳು ಮತ್ತು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗಿದ್ದ ಸಿಬ್ಬಂದಿ ಹಾಗೂ ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸಿಬಿಐ ವಕ್ತಾರ ಆರ್‌.ಸಿ. ಜೋಶಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.