ADVERTISEMENT

ನಾರದ ಪ್ರಕರಣ: ಹೈಕೋರ್ಟ್‌ನ ಗೃಹ ಬಂಧನ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 24 ಮೇ 2021, 5:20 IST
Last Updated 24 ಮೇ 2021, 5:20 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ಕೋಲ್ಕತ್ತ: ನಾರದ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿ ಜೈಲಲ್ಲಿರುವ ತೃಣಮೂಲ ಕಾಂಗ್ರೆಸ್‌ನ ನಾಲ್ವರು ನಾಯಕರನ್ನು ಗೃಹಬಂಧನದಲ್ಲಿಡಲು ಕಲ್ಕತ್ತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದೆ.

ನಾರದ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ನ ಮೂವರು ಹಿರಿಯ ನಾಯಕರು ಮತ್ತು ಸಚಿವರನ್ನು ಸಿಬಿಐ ಮೇ 17ರಂದು ಬಂಧಿಸಿತ್ತು.

ಸಾರಿಗೆ ಸಚಿವ ಫಿರ್ಹಾದ್‌ ಹಕೀಮ್‌, ಪಂಚಾಯತ್‌ ಸಚಿವ ಸುಬ್ರತಾ ಮುಖರ್ಜಿ, ಶಾಸಕ ಮದನ್‌ ಮಿತ್ರಾ ಮತ್ತು ಟಿಎಂಸಿಯ ಮಾಜಿ ಮುಖಂಡ ಸೋವನ್‌ ಚಟರ್ಜಿ ಅವರನ್ನು ಬಂಧಿಸಲಾಗಿದೆ.

ADVERTISEMENT

ಈ ಪ್ರಕರಣದಲ್ಲಿ ನಾಲ್ವರು ಮುಖಂಡರಿಗೂ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಆದರೆ, ಕಲ್ಕತ್ತ ಹೈಕೋರ್ಟ್‌ ಜಾಮೀನು ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸುವಂತೆ ಮುಖಂಡರು ಮನವಿ ಮಾಡಿದ್ದು ಇದರ ವಿಚಾರಣೆ ಇಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.