ಸತ್ಯಪಾಲ್ ಮಲಿಕ್
ನವದೆಹಲಿ: ಕಿರು ಜಲವಿದ್ಯುತ್ ಯೋಜನೆಯಲ್ಲಿ ₹2,200 ಕೋಟಿ ಮೊತ್ತದ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹಾಗೂ ಇತರ ಐವರ ವಿರುದ್ಧ ಗುರುವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಮಲಿಕ್ ಹಾಗೂ ಇತರ ಐವರ ವಿರುದ್ಧ ಮೂರು ವರ್ಷಗಳ ನಂತರ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸತ್ಯಪಾಲ್ ಮಲಿಕ್, ‘ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿಲ್ಲ’ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕ್ ಮತ್ತಿತರರಿಗೆ ಸೇರಿದ ಸ್ಥಳಗಳಲ್ಲಿ 2024ರ ಫೆಬ್ರುವರಿಯಲ್ಲಿ ಸಿಬಿಐ ಶೋಧ ನಡೆಸಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಸತ್ಯಪಾಲ್ ಮಲಿಕ್ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಎರಡು ಪೈಲ್‌ಗಳನ್ನು ತೆರವುಗೊಳಿಸಲು ₹ 300 ಕೋಟಿ ಲಂಚ ಪಡೆದಿರುವ ಆರೋಪವನ್ನು ಎದುರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.