ADVERTISEMENT

ತನಿಖೆ ಮೇಲ್ವಿಚಾರಣೆಗೆ ಮಣಿಪುರಕ್ಕೆ ತೆರಳಿದ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್

ಪಿಟಿಐ
Published 19 ಡಿಸೆಂಬರ್ 2023, 2:59 IST
Last Updated 19 ಡಿಸೆಂಬರ್ 2023, 2:59 IST
ಪ್ರವೀಣ್ ಸೂದ್
ಪ್ರವೀಣ್ ಸೂದ್   

ನವದೆಹಲಿ: ಮಣಿಪುರದ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ಪರಿಶೀಲಿಸಲು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ರಾಜಧಾನಿ ಇಂಫಾಲ್‌ಗೆ ತಲುಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ರಾಜ್ಯ ಪೊಲೀಸರು ತನಿಖೆ ನಡೆಸಿದ್ದ 27 ಪ್ರಕರಣಗಳನ್ನು ಸಿಬಿಐ ವಹಿಸಿಕೊಂಡಿದೆ.

ಹಿಂಸಾಚಾರದಲ್ಲಿ 175ಕ್ಕೂ ಹೆಚ್ಚು ಮಂದಿ ಮೃತಪಟ್ಟರೆ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ADVERTISEMENT

ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಪ್ರವೀಣ್ ಸೂದ್, ಗುವಾಹಟಿಯಿಂದ ಇಂಫಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಬರಮಾಡಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪ್ರವೀಣ್ ಸೂದ್, ಡಿಜಿಪಿ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಅವರು ಹೇಳಿದ್ದಾರೆ.

ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ(ಎಸ್‌ಟಿ) ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಮೇ 3ರಂದು ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು. ಬಳಿಕ, ಘರ್ಷಣೆ ಭುಗಿಲೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.