ADVERTISEMENT

ಜಮ್ಮು–ಕಾಶ್ಮೀರದ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ: 33 ಕಡೆ ಸಿಬಿಐ ಶೋಧ

ಪಿಟಿಐ
Published 13 ಸೆಪ್ಟೆಂಬರ್ 2022, 11:30 IST
Last Updated 13 ಸೆಪ್ಟೆಂಬರ್ 2022, 11:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ‘ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಯ (ಜೆಕೆಎಸ್‌ಎಸ್‌ಬಿ) ಮಾಜಿ ಅಧ್ಯಕ್ಷ ಖಾಲಿದ್‌ ಜಹಾಂಗೀರ್‌ ಅವರಿಗೆ ಸಂಬಂಧಿಸಿದ ಸ್ಥಳ ಸೇರಿದಂತೆ 33 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಜೆಕೆಎಸ್‌ಎಸ್‌ಬಿಯ ಪರೀಕ್ಷಾ ನಿಯಂತ್ರಕ ಅಶೋಕ್‌ ಕುಮಾರ್‌ ಅವರಿಗೆ ಸೇರಿದ ಸ್ಥಳದಲ್ಲೂ ಶೋಧ ನಡೆಸಲಾಗಿದೆ’ ಎಂದು ಅವರು ಹೇಳಿದರು.

‘ಜಮ್ಮು, ಶ್ರೀನಗರ, ಹರಿಯಾಣದ ಕರ್ನಾಲ್‌, ರೇವಾರಿ, ಗುಜರಾತ್‌ನ ಗಾಂಧಿನಗರ, ದೆಹಲಿ, ಉತ್ತರಪ್ರದೇಶದ ಗಾಜಿಯಾಬಾದ್‌, ಕರ್ನಾಟಕದ ಬೆಂಗಳೂರಿನಲ್ಲೂ ಶೋಧ ನಡೆಯುತ್ತಿದೆ. ಸಬ್‌ ಇನ್ಸ್‌ಪೆಕ್ಟರ್‌ಗಳ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಬಿಐ ನಡೆಸುತ್ತಿರುವ ಎರಡನೇ ದಾಳಿ ಇದಾಗಿದೆ’ ಎಂದರು.

ADVERTISEMENT

‘ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ಭರ್ತಿಗೆ 2022ರ ಮಾರ್ಚ್‌ 23ರಂದು ಜೆಕೆಎಸ್‌ಎಸ್‌ಬಿ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ದೂರು ಬಂದ ಕಾರಣ 33 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಆಗಸ್ಟ್‌ 5ರಂದು ಸಿಬಿಐ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.