ADVERTISEMENT

ಜಾನುವಾರು ಕಳ್ಳಸಾಗಣೆ: ಅನುಬ್ರತಾ ಮೊಂಡಲ್ ಸಿಬಿಐ ಕಸ್ಟಡಿ ಆ. 24ರವರೆಗೆ ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಆಗಸ್ಟ್ 2022, 10:28 IST
Last Updated 20 ಆಗಸ್ಟ್ 2022, 10:28 IST
ಅನುಬ್ರತಾ ಮೊಂಡಲ್ –ಐಎಎನ್‌ಎಸ್ ಚಿತ್ರ
ಅನುಬ್ರತಾ ಮೊಂಡಲ್ –ಐಎಎನ್‌ಎಸ್ ಚಿತ್ರ   

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅನುಬ್ರತಾ ಮೊಂಡಲ್ ಅವರ ಸಿಬಿಐ ಕಸ್ಟಡಿಯನ್ನು ಆಗಸ್ಟ್ 24ರವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಲಯ ಅನುಬ್ರತಾ ಮೊಂಡಲ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಕಸ್ಟಡಿ ವಿಸ್ತರಣೆ ಮಾಡಿದೆ ಎಂದು ‘ಎಎನ್ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 11ರಂದು ಮೊಂಡಲ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

ಮೊಂಡಲ್‌ ಅವರು ಬೀರ್‌ಭೂಮ್‌ನ ಟಿಎಂಸಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ. ಇತ್ತೀಚೆಗಷ್ಟೇ ಮೊಂಡಲ್ ಅವರಿಗೆ ಸೇರಿದ್ದು ಎನ್ನಲಾದ ₹ 16.97 ಕೋಟಿ ಮೌಲ್ಯದ ಸ್ಥಿರ ಠೇವಣಿಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.